Advertisement

ಭಾರಿ ಮಳೆಯಿಂದ ಆಲಮಟ್ಟಿ ಶಾಸ್ತ್ರೀ ಸಾಗರದ ಒಳಹರಿವು ಹೆಚ್ಚಳ: ಕೆಳಭಾಗದ ಜನರಿಗೆ ಎಚ್ಚರಿಕೆ

03:25 PM Jul 16, 2024 | Team Udayavani |

ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಶಾಸ್ತ್ರೀ ಸಾಗರದ ಒಳಹರಿವು ಹೆಚ್ಚಳವಾಗಿದೆ. ಕಾರಣ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುವ ಕುರಿತು ವಿಜಯಪುರ ಜಿಲ್ಲೆಯ ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Advertisement

ಮಂಗಳವಾರ ಬೆಳಿಗ್ಗೆ 8 ಗಂಟೆ ವರೆಗೆ ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ 61,683 ಕ್ಯೂಸೆಕ್ ನೀರಿನ ಒಳಹರಿವು ಇತ್ತು. ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ.

ಇದೀಗ ಶಾಸ್ತ್ರೀ ಸಾಗರ ಜಲಾಶಯದಿಂದ ಜಲ ವಿದ್ಯುತ್ ಉತ್ಪಾದನೆಗಾಗಿ 17,083 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ಜಲಾಶಯದಿಂದ ಕೃಷ್ಣಾ ನದಿಗೆ ಯಾವುದೇ ಕ್ಷಣದಲ್ಲಿ 20 ರಿಂದ 40 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತದೆ. ಹೀಗಾಗಿ ಕೃಷ್ಣಾ ನದಿ ತೀರದ ಜನರು ಎಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಹತ್ತಿರದ ಎತ್ತರ ಹಾಗೂ ಸುರಕ್ಷಿತ ಪ್ರದೇಶಗಳಿಗೆ ತೆರಳಯವಂತೆ ಕೃಷ್ಣಾ ಭಾಗ್ಯ ಜಲ‌ನಿಗಮದ ಜಲಾಶಯದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Panaji: ಭಾರಿ ಮಳೆಗೆ ಕುಸಿದು ಬಿದ್ದ ಮನೆ… ಮಹಿಳೆಯ ಜೀವ ಉಳಿಸಿದ ಬಿಸ್ಕೆಟ್

Advertisement

Udayavani is now on Telegram. Click here to join our channel and stay updated with the latest news.

Next