Advertisement

ಕಾಸರಗೋಡು, ಕೇರಳದಲ್ಲಿ ನಾಲ್ಕು ದಿನ ಭಾರೀ ಮಳೆ; ಆರೇಂಜ್ ಅಲರ್ಟ್- ಐಎಂಡಿ

09:47 AM Oct 22, 2019 | Nagendra Trasi |

ನವದೆಹಲಿ: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೇರಳದ 12 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.

Advertisement

ಕೇರಳದ ತಿರುವನಂತಪುರಂ, ಕೊಲ್ಲಂ, ಅಲಫ್ಪುಝಾ, ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್ ಸೇರಿ 12 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.

ಕಾಸರಗೋಡಿನಲ್ಲಿಯೂ ಸೋಮವಾರದಿಂದ ನಾಲ್ಕು ದಿನಗಳವರೆಗೆ ವರ್ಷಧಾರೆಯಾಗಲಿದೆ ಎಂದು ತಿಳಿಸಿದೆ. ಸೋಮವಾರ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಕೇರಳದ ತಗ್ಗುಪ್ರದೇಶಗಳೆಲ್ಲ ಜಲಾವೃತಗೊಂಡಿವೆ.

Advertisement

Udayavani is now on Telegram. Click here to join our channel and stay updated with the latest news.

Next