ಬೆಂಗಳೂರು: ಮುಂಗಾರು ಆರಂಭಕ್ಕೂ ಮುನ್ನವೇ ಹವಾಮಾನ ವೈಪರೀತ್ಯದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಹಲವೆಡೆ ಮರಗಳು ಧರೆಗುರುಳಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಉಷ್ಣಾಂಶ ಹೆಚ್ಚಾದಾಗ ಮಳೆ ಬರುತ್ತದೆ. ಈ ಮಳೆ ಅರ್ಧ ಗಂಟೆ, ಒಂದು ಗಂಟೆ ಬರುತ್ತೆ. ಇನ್ನೂ ಮೂರು ದಿನಗಳ ಕಾಲ ಅಲ್ಲಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಮಳೆಯ ಅಬ್ಬರದಿಂದ ಹಲವೆಡೆ ಮರಗಳು ಧರೆಗುರುಳಿದ್ದು, ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮಲ್ಲೇಶ್ವರಂ, ರಾಜಾಜಿನಗರ, ಎಂಜಿ ರಸ್ತೆ, ಹೆಬ್ಬಾಳ ಸೇರಿದಂತೆ ಬೆಂಗಳೂರಿನಾದ್ಯಂತ ಮಳೆ ಸುರಿದಿದೆ.
Photo’s: ಫಕ್ರುದ್ದೀನ್