Advertisement

ಗೋವಾ ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ

01:41 PM Jul 13, 2021 | Team Udayavani |

ಪಣಜಿ: ಗೋವಾ ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ಜುಲೈ 15 ರವರೆಗೆ ಇದೇ ರೀತಿ ಅತಿವೃಷ್ಠಿಯಾಗಲಿದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ.

Advertisement

ಮಂಗಳವಾರ ಸುರಿಯುತ್ತಿರುವ ಧಾರಾಕಾರ ಮಳೆಗೆ ಗೋವಾ ರಾಜಧಾನಿ ಪಣಜಿಯಲ್ಲಿ ಎಲ್ಲ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಹದಾಯಿ, ವಾಳವಂಟಿ, ಜುವಾರಿ ನದಿ ಉಕ್ಕಿಹರಿಯುತ್ತಿದ್ದು, ನದಿ ಅಕ್ಕ ಪಕ್ಕದ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next