Advertisement

ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

11:22 PM Nov 18, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ,ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲಾ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ವಿಶಾಲ್ ಆರ್.  ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಕುರಿತು ಸೂಚನೆ ನೀಡಿದ್ದಾರೆ.

ರಾಜಾ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲು ಸೂಚನೆ ನೀಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next