Advertisement
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿರುತ್ತಿರುವ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿವೆ. ಇದು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ.
ಕಳೆದ ಎರಡು ದಿನಗಳಿಂದ ರಾಮನಗರ ಜಿಲ್ಲೆಯಾದ್ಯಂತ ಸುರಿದ ಮಳೆ ಜನತೆಯನ್ನು ಹೈರಾಣಾಗಿಸಿದೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಂತೂ ಕೆರೆಯಂತಾಗಿ ರೂಪುಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಶನಿವಾರದಿಂದ ಮೂರು ದಿನಗಳವರೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಾರ್ಗ ಬದಲಿಸಿಕೊಂಡು ಹೋಗುವಂತೆ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆ ಪ್ರಯಾಣ ಮಾಡುವವರು ಕನಕಪುರ-ಹಾರೋಹಳ್ಳಿ ಮಾರ್ಗವಾಗಿ ಹಾಗೂ ಮಾಗಡಿ-ಮಂಚಿನಬೆಲೆ ಮಾರ್ಗ ಬಳಸುವಂತೆ ಬದಲಿ ಮಾರ್ಗ ಸೂಚಿಸಲಾಗಿದೆ.
Related Articles
Advertisement