Advertisement

ಇಂದು, ನಾಳೆ ಭಾರೀ ಮಳೆ ಸಾಧ್ಯತೆ; 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

08:05 PM Oct 15, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಭಾನುವಾರ ಮತ್ತು ಸೋಮವಾರ (ಅ.16, 17) ಕೂಡ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಮಂಡ್ಯದಲ್ಲಿ 17 ಸೆಂ.ಮೀ. ಮಳೆ: ರಾಜ್ಯದಲ್ಲಿ ಶುಕ್ರವಾರ ಕೂಡ ಧಾರಾಕಾರ ಮಳೆ ಸುರಿದಿದ್ದು, ಮಂಡ್ಯದ ಕೃಷಿ ವಿಜ್ಞಾನ ಕೇಂದ್ರದ ಬಳಿ ಭರ್ಜರಿ 17 ಸೆಂ.ಮೀ. ಮಳೆಯಾಗಿದೆ.

ಮೈಸೂರಿನ ಟಿ. ನರಸೀಪುರ, ಚಾಮರಾಜನಗರದ ಕೊಳ್ಳೇಗಾಲದಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯ ಯಡ್ರಾಮಿ, ರಾಮನಗರದ ಕನಕಪುರದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಕೂಡ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next