Advertisement

Heavy Rain: ಉಡುಪಿ, ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

08:46 PM Jul 13, 2024 | Team Udayavani |

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಜುಲೈ 16ರ ವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಭಾನುವಾರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗವು 40-50 ಕಿ.ಮೀ. ತಲುಪುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next