Advertisement

Rain: ಭಾರೀ ಮಳೆ: ಗೋವಾಗೆ ರೆಡ್‌ ಅಲರ್ಟ್‌

11:25 PM Oct 01, 2023 | Team Udayavani |

ಪಣಜಿ: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಗೋವಾ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗೋವಾಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಗಂಟೆಗೆ ಸುಮಾರು 60ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ ಗೋವಾದ ಪೆರ್ನಮ್‌, ತಿಸ್ವಾಡಿ, ಬ್ಯಾರೇಜ್‌, ಬಿಚ್ಲಿಮ್‌ ಮತ್ತು ಸತ್ತಾರಿ ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದೆ.

Advertisement

ಈಶಾನ್ಯ ದಿಕ್ಕಿನಲ್ಲಿ ಮತ್ತಷ್ಟು ಮೋಡ ಕವಿಯಲಿದ್ದು ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸರಕಾರವು ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನೂ ಈಗಾಗಲೇ ಸಜ್ಜುಗೊಳಿಸಿದೆ. ಇನ್ನು ಮಧ್ಯ ಮಹಾರಾಷ್ಟ್ರ, ಕೇರಳದಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಕೆಲ ದಿನಗಳೂ ಕೂಡ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಕೇರಳದ 5 ಜಿಲ್ಲೆಗಳಿಗೆ ನೀಡಿದ್ದ ಹಳದಿ ಅಲರ್ಟ್‌ ಅನ್ನೂ ಮುಂದುವರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next