Advertisement

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

08:04 PM Jul 08, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಮಳೆ ತೀವ್ರವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ.

ಭಾನುವಾರ ಸಂಜೆಯೊಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ರಜೆ ಘೋಷಿಸಲಾಗಿತ್ತು.

ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆ ಯನ್ನು 1077/ 0824-2442590 ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next