Advertisement

ಭಾರಿ ಮಳೆ: ಖಾನಾಪುರದ ಶಾಲೆಗಳಿಗೆ ಶನಿವಾರ ರಜೆ ಘೋಷಣೆ

07:47 PM Jul 21, 2023 | Team Udayavani |

ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Advertisement

ಕಳೆದ ಮೂರ್ನಾಲ್ಕು ದಿನಗಳಿಂದ ಖಾನಾಪುರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಇದಲ್ಲದೆ ಖಾನಾಪುರ ತಾಲೂಕಿನ ಚಿಕಲೆ, ಪಾರವಾಡ ಹಾಗೂ ಚಿಗುಲೆ ವಾಟರ್ ಫಾಲ್ಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲ ಜಲಪಾತಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next