Advertisement
ಜು.25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ ಪರಿಣಾಮ ರಜೆ ವಿಸ್ತರಿಸಿದ್ದು, ಜು.27 ರಂದು ರಜೆ ಘೋಷಿಸಲಾಗಿದೆ.ಈ ಕುರಿತಂತೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
Related Articles
Advertisement
ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜು.27 ರಂದು(ಶನಿವಾರ) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಳೆಯು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ರಜೆಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.