Advertisement

ಮುಂದೂಡಿಕೆ ಆಗದ ಸೆಮಿಸ್ಟರ್ ಪರೀಕ್ಷೆ: ಅಪಾಯಕಾರಿ ಸ್ಥಿತಿಯಲ್ಲಿ ಪದವಿ ವಿದ್ಯಾರ್ಥಿಗಳ ಸಂಚಾರ

02:25 PM Jul 24, 2023 | Team Udayavani |

ಸುಬ್ರಹ್ಮಣ್ಯ: ಪರಿಸರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿರುವುದರಿಂದ ಪದವಿ ವಿದ್ಯಾರ್ಥಿಗಳು ಅಪಾಯಕಾರಿಯಾಗಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಯಿತು.

Advertisement

ಮಂಗಳೂರು ಯೂನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆಯ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಈ ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ.

ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next