Advertisement
ಶಿರಾಡಿ ಘಾಟಿ ಬಂದ್ಶಿರಾಡಿ ಘಾಟಿ ರಸ್ತೆಯ ಸಕಲೇಶಪುರ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿರುವುದರಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ.
ರಾತ್ರಿ ವಾಹನ ಸಂಚಾರ ನಿಷೇಧ
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಗುರುವಾರ ರಾತ್ರಿ 8ರಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಿರೂರು ಗುಡ್ಡ ಕುಸಿತ: ರಾ.ಹೆ. 66 ಬಂದ್
ಅಂಕೋಲಾ ತಾಲೂಕಿನ ಶಿರೂರು ಬಳಿ ಮಂಗಳ ವಾರ ಮಂಗಳೂರು-ಗೋವಾ ಹೆದ್ದಾರಿಗೆ ಕುಸಿದ ಗುಡ್ಡವನ್ನು ಇನ್ನೂ ಪೂರ್ಣವಾಗಿ ತೆರವುಗೊಳಿಸಿಲ್ಲ. ಹೀಗಾಗಿ ರಾ.ಹೆ. 66ರ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.
Related Articles
ಸದ್ಯ ಚಾರ್ಮಾಡಿ ಘಾಟಿ ರಸ್ತೆ, ನಾಗೋಡಿ ಘಾಟಿ ರಸ್ತೆ ಮತ್ತು ಮಾಳ ಘಾಟಿ ರಸ್ತೆಗಳು ಮಾತ್ರ ಸುಸ್ಥಿತಿಯಲ್ಲಿವೆ. ಹುಲಿಕಲ್ ರಸ್ತೆಯ ಕೆಲವೆಡೆ ಗುಡ್ಡ ಕುಸಿತ ಆಗಿದ್ದರೂ ವಾಹನಗಳು ಸಂಚರಿಸುತ್ತಿವೆ. ಆದರೆ ಉಳಿದೆಲ್ಲ ಘಾಟಿ ರಸ್ತೆಗಳು ಸ್ಥಗಿತ ಗೊಂಡಿರುವುದರಿಂದ ಈ ರಸ್ತೆಗಳ ಮೇಲೆ ಒತ್ತಡ ಹೆಚ್ಚಿದ್ದು, ಭಾರೀ ಮಳೆಯಾಗುತ್ತಿರುವುದರಿಂದ ಯಾವುದೇ ಸಮಯದಲ್ಲಿ ಇಲ್ಲೂ ಸಂಚಾರ ಸ್ಥಗಿತಗೊಳ್ಳುವ ಆತಂಕವಿದೆ. ಬಿಸಿಲೆ ಘಾಟಿ ರಸ್ತೆ ಇಕ್ಕಟ್ಟಾಗಿದ್ದು, ಸಂಚಾರ ದುಸ್ತರವಾಗಿದೆ.
Advertisement