Advertisement

ಜುಲೈ 31ವರೆಗೂ ವ್ಯಾಪಕ ಮಳೆ

10:28 PM Jul 27, 2021 | Team Udayavani |

ಬೆಂಗಳೂರು: ಬಂಗಾಳ ಕೊಲ್ಲಿ  ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ಪರಿಣಾಮ ರಾಜ್ಯದ ಹಲವೆಡೆ ಜುಲೈ 31ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

Advertisement

ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರಿಂದ ಜುಲೈ 31ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ನೈರುತ್ಯ ಮುಂಗಾರು ಮಂಗಳವಾರ ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಮುಖ್ಯವಾಗಿ, ಶಿವಮೊಗ್ಗ ಮತ್ತು ಕೊಲ್ಲೂರಿನಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಎರಡು ದಿನ ನಗರ ಸೇರಿದಂತೆ ಸುತ್ತಮುತ್ತಲ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next