Advertisement

Heavy Rain ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆ?

12:04 AM Jul 31, 2024 | Team Udayavani |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಜು.31ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

Advertisement

ಪ್ರತೀ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಕನ್ನಡ ಮತ್ತು ಹಾಸನ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next