Advertisement

Heavy Rain: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ‌ ಘೋಷಣೆ

09:09 PM Jul 21, 2024 | Team Udayavani |

ಬೆಳಗಾವಿ: ಬೆಳಗಾವಿ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ಮತ್ತು ಜು. 23ರಂದು ರಜೆ ಘೋಷಿಸಲಾಗಿದೆ.

Advertisement

ಅದೇ ರೀತಿ ಖಾನಾಪುರ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next