Advertisement
ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕಿನಲ್ಲಿ ವಿವಿಧ ಕಡೆಗಳಲ್ಲಿ ಮನೆಗಳ ಮೇಲೆ ಮರ ಬಿದ್ದು, ನೀರು ನುಗ್ಗಿ ವ್ಯಾಪಕ ಹಾನಿ ಸಂಭವಿಸಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
Related Articles
Advertisement
ಸೀತಾನದಿ ತುಂಬಿ ಹರಿದ ಪರಿಣಾಮ ಕೆಲಕಾಲ ಆಗುಂಬೆ-ಸೋಮೇಶ್ವರ ಹೆದ್ದಾರಿ ಸಂಪರ್ಕ ಕಡಿತಗೊಂಡು ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಹೆಚ್ಚು ಹಾನಿ ಸಂಭವಿಸಿಲ್ಲ.
ಗಾಳಿಯಿಂದಾಗಿ ಜಿಲ್ಲೆಯಲ್ಲಿ 152 ವಿದ್ಯುತ್ ಕಂಬ ಧರೆಗುರುಳಿದ್ದು, 2.18 ಕಿ. ಮೀ. ವಿದ್ಯುತ್ ಲೈನ್ ಮತ್ತು 8 ವಿದ್ಯುತ್ ಪರಿವರ್ತಕಗಳಿಗೆ ಹಾನಿ ಸಂಭವಿಸಿದೆ. 25.72 ಲಕ್ಷ ರೂ. ನಷ್ಟ ಸಂಭವಿಸಿದೆ.ಕಾರ್ಕಳ 99.8, ಕುಂದಾಪುರ 186.9, ಉಡುಪಿ 98.8, ಬೈಂದೂರು 150.9, ಬ್ರಹ್ಮವರ 164.3, ಕಾಪು 60.6, ಹೆಬ್ರಿ 202.2 ಮಿ. ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 147.3 ಮಿ. ಮೀ. ಸರಾಸರಿ ಮಳೆಯಾಗಿದೆ.