Advertisement

ಭಾರೀ ಮಳೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

09:46 AM Oct 26, 2019 | Mithun PG |

ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಉಡುಪಿಯ ಶಾಲಾ- ಕಾಲೇಜುಗಳಿಗೆ ಇಂದು (ಶುಕ್ರವಾರ ಅ.25)  ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

Advertisement

ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.

ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಗದೀಶ್ ಮೌಖಿಕ ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next