Advertisement

ಭಾರೀ ಮಳೆ: ಉತ್ತರಾಖಂಡಕ್ಕೆ ಎಚ್ಚರಿಕೆ

08:25 PM Jul 02, 2023 | Team Udayavani |

ನವದೆಹಲಿ: ಉತ್ತರಾಖಂಡದಲ್ಲಿ ಚಾರ್‌ಧಾಮ್‌ ಯಾತ್ರೆ ನಡುವೆಯೇ, ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಜು.5ರವರೆಗೆ ಭಾರತೀಯ ಹವಾಮಾನ ಇಲಾಖೆ ರಾಜ್ಯಕ್ಕೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

Advertisement

ಚಮೋಲಿ ಜಿಲ್ಲೆಯಲ್ಲಿನ ಗುಡ್ಡ ಕುಸಿತದಿಂದಾಗಿ ಬದರೀನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ 13 ಗಂಟೆಗಳವರೆಗೆ ರಸ್ತೆ ಸಂಚಾರ ನಿರ್ಬಂಧಿಸಲಾಗಿತ್ತು. ಅಲ್ಲದೇ, ರಾಜ್ಯದ ವಿವಿಧ ಭಾಗಗಳಲ್ಲೂ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮತ್ತೂಂದೆಡೆ ಗುಜರಾತ್‌ನಲ್ಲಿ ಮುಂಗಾರು ಆಗಮನದೊಂದಿಗೆ ಭಾರೀ ಮಳೆಯಾದ ಪರಿಣಾಮ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿಪತ್ತು ನಿರ್ವಹಣೆ ಪಡೆಗಳ ಕಾರ್ಯಾಚರಣೆಯ ಹೊರತಾಗಿಯೂ ನೆರೆ ಪೀಡಿತ ಪ್ರದೇಶಗಳಲ್ಲಿನ ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯನ್ನು ಸಹಕರಿಸುವಂತೆ ಮನವಿ ಮಾಡಲಾಗಿದೆ. ಇನ್ನು ಗೋವಾದಲ್ಲೂ ಜು.4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಕಟ್ಟೆಚ್ಚರ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next