Advertisement
ಕೊಡಗಿನಲ್ಲಿ ಬುಧವಾರ ಸುಮಾರು ಒಂದು ತಾಸು ಸುರಿದ ಮಳೆಗೆ ಚರಂಡಿ ಮತ್ತು ರಸ್ತೆಗಳಲ್ಲಿ ನೀರು ತುಂಬಿ ಹರಿದಿದೆ. ರಾಜಾಸೀಟು ಉದ್ಯಾವನದ ಆವರಣದಲ್ಲಿ ಮರವೊಂದು ಬಿದ್ದು ಹಾನಿಯಾಗಿದೆ. ಮಂಗಳೂರಿಗೆ ಸಾಗುವ ರಸ್ತೆಯ ಒಂದು ಬದಿಯ ಬರೆ ಕುಸಿದಿದ್ದು, ನಿರಂತರ ಮಳೆಯಾದರೆ ರಸ್ತೆಗೆ ಹಾನಿಯಾಗುವ ಸಾಧ್ಯತೆಗಳಿವೆ. ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಸಿದ್ದಾಪುರ, ಸುಂಟಿಕೊಪ್ಪ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಡಿಕೇರಿ ನಗರದ ವಿವಿಧ ಬಡಾವಣೆಗಳ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಬುಧವಾರ ಬೆಳಗ್ಗಿನಿಂದ ಆರಂಭಿಸಿ ರಾತ್ರಿಯ ವರೆಗೂ ಕರಾವಳಿಯ ವಿವಿಧ ಪ್ರದೇಶಗಳು ಗುಡುಗು ಸಿಡಿಲು, ಗಾಳಿ ಸಹಿತ ಭಾರೀ ಮಳೆಗೆ ಸಾಕ್ಷಿಯಾದವು. ಪಶ್ಚಿಮ ಘಟ್ಟ ತಪ್ಪಲಿನ ಸುಳ್ಯ, ಸುಬ್ರಹ್ಮಣ್ಯ, ಪಂಜ, ಬೆಳ್ತಂಗಡಿ ಭಾಗದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿವೆ. ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸಂಚಾರಕ್ಕೆ ಕೂಡ ಅಡ್ಡಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಕೆಲವು ದಿನಗಳಿಂದ ಈ ಭಾಗದಲ್ಲಿ ಸತತ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ಏರಿದೆ.
Related Articles
ದಕ್ಷಿಣ ಒಳನಾಡಿನ ವಿವಿಧೆಡೆಗಳಲ್ಲಿ ಒಂದೆರಡು ದಿನ ಗಳಿಂದ ಮಳೆಯಾಗುತ್ತಿದ್ದು, ಬುಧವಾರವೂ ಮುಂದು ವರಿದಿದೆ. ಹಾಸನ, ಮಂಡ್ಯ ಜಿಲ್ಲೆಗಳ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಅತ್ತ ಉತ್ತರ ಒಳನಾಡಿನ ರಾಯಚೂರಿನಲ್ಲಿ ಲ್ಲಿ ಸಿಡಿಲು ಬಡಿದು ಕುರಿಗಾಹಿ ಮತ್ತು 16 ಕುರಿಗಳು ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.
Advertisement
ಸಿಡಿಲು ಸಹಿತ ಗಾಳಿ ಮಳೆ ಸಾಧ್ಯತೆಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ಎ. 15 ಮತ್ತು 16ರಂದು ಹಾಗೂ ಉತ್ತರ ಒಳನಾಡಿನಲ್ಲಿ ಎ. 15ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಿಸಿದೆ. ಈ ಎರಡು ದಿನಗಳಲ್ಲಿ ಸಿಡಿಲಿನ ಆರ್ಭಟ ಹೆಚ್ಚಿರಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ಅಲ್ಲಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಎ. 19ರ ವರೆಗೂ ಮುಂದುವರಿಯುವ ಸಾಧ್ಯತೆಗಳಿವೆ. ಇದೇ ಅವಧಿಯಲ್ಲಿ ಕೇರಳದ ವಿವಿಧ ಕಡೆಗಳಲ್ಲಿಯೂ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.