Advertisement
ಮಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ 8.30ರಿಂದ ಬಿರುಸಿನ ಮಳೆ ಸುರಿದಿದೆ. ನಗರದ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ನಗರದ ಕೊಟ್ಟಾರ, ಲಾಲ್‌ಬಾಗ್, ಕೊಟ್ಟಾರಚೌಕಿ ಸೇರಿದಂತೆ ಕೆಲವು ಕಡೆಗಳಲ್ಲಿ ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ ಕಷ್ಟವಾಗಿತ್ತು. ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ.
Related Articles
ದಕ್ಷಿಣ ಕನ್ನಡ, ಕಾಸರಗೋಡು ಸಹಿತ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಿಸಿದ್ದು, ಶನಿವಾರ ಕರಾವಳಿ ಆದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ವೇಳೆ ಮಳೆ ಸಹಿತ ಬಿರುಗಾಳಿ, ಸಿಡಿಲು ಇರಬಹುದೆಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Advertisement