Advertisement

ಕುಂಭದ್ರೋಣ ಮಳೆಗೆ ಬೆಂಗಳೂರು ತತ್ತರ;ಜನಜೀವನ ಅಸ್ತವ್ಯಸ್ತ

09:02 AM Aug 15, 2017 | Team Udayavani |

ಬೆಂಗಳೂರು: ಮಂಗಳವಾರ ತಡರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರಿಂದಾಗಿ  71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ತೀವ್ರ ಅಡ್ಡಿಯಾಗಿದೆ.

Advertisement

ಶಾಂತಿನಗರ, ವಿಲ್ಸನ್‌ ಗಾರ್ಡನ್‌, ಡೈರಿ ಸರ್ಕಲ್‌, ಮಡಿವಾಳ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್‌ ಸಿಟಿ, ಸಿಲ್ಕ್ ಬೋರ್ಡ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಮಾರ್ಗ ಮದ್ಯದಲ್ಲಿಯೇ ನೂರಾರು ವಾಹನಗಳು ಕೆಟ್ಟು ನಿಂತಿವೆ. ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೀವ್ರವಾಗಿ ಪರದಾಡುವಂತಾಗಿದೆ.

ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಜನ ನಿದ್ದೆಯನ್ನೂ ಮಾಡದೇ ಮನೆಳಿಗೆ ನುಗ್ಗಿರುವ ನೀರನ್ನು ಹೊರಹಾಕುವುದರಲ್ಲಿ ನಿರತರಾಗಿದ್ದಾರೆ. ಸರಾಸರಿ 175 ಮಿಲಿ ಮೀಟರ್‌ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next