Advertisement
ಮಂಗಳೂರು ನಗರದಲ್ಲಿ ಬೆಳಗ್ಗೆಯೇ ಆರಂಭವಾದ ಮಳೆ ಮಧ್ಯಾಹ್ನದ ಬಳಿಕ ಬಿರುಸು ಪಡೆದಿತ್ತು. ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿತ್ತು. ನಗರದಲ್ಲಿ ಈಗಾಗಲೇ ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ, ಗೈಲ್ ಗ್ಯಾಸ್ ಲೈನ್ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇದರಿಂದಾಗಿ ಸರಿಯಾಗಿ ನೀರು ಹರಿಯಲು ಸಾಧ್ಯವಾಗದೆ ರಸ್ತೆಯಲ್ಲೇ ನೀರು ನಿಂತಿತ್ತು. ನಗರದ ಕೆಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
Related Articles
ಉಡುಪಿ ಜಿಲ್ಲೆಯಲ್ಲಿ ಮಳೆ ಬಿರುಸಾಗಿದ್ದು, ಸೋಮವಾರ ತಡರಾತ್ರಿ, ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಮಂಗಳವಾರದ ಮಳೆಗೆ ಕೃಷಿ ಭೂಮಿ, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಉಡುಪಿ, ಪರ್ಕಳ, ಮಲ್ಪೆ ಮಧ್ಯಾಹ್ನ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ಬ್ಲಾಕ್ ಆಗಿತ್ತು. ಕರಾವಳಿ ಬೈಪಾಸ್, ಉಡುಪಿ-ಮಣಿಪಾಲ ಮುಖ್ಯರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದರು.
Advertisement
ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಸಿದ್ದಾಪುರ, ಪಡುಬಿದ್ರಿ, ಹೆಬ್ರಿ, ಕಾಪು ಭಾಗದಲ್ಲಿ ನಿರಂತರ ಮಳೆಯಾಗಿದೆ.
ಜೂ. 22ರಿಂದ 26ರ ವರೆಗೆ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೃಷಿಕರು, ಮೀನುಗಾರರು ಎಚ್ಚರ ವಹಿಸುವಂತೆ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ ಜಿಕೆಎಂಎಸ್ ವಿಭಾಗ ಪ್ರಕಟನೆ ತಿಳಿಸಿದೆ.
3 ದಿನ “ಆರೆಂಜ್ ಅಲರ್ಟ್’ರಾಜ್ಯ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಭಾರತೀಯ ಹವಾಮಾನ ಇಲಾಖೆಯು “ಆರೆಂಜ್ ಅಲರ್ಟ್’ ಘೊಷಿಸಿದೆ. ಜೂ. 22ರಿಂದ 24ರ ವರೆಗೆ ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಜತೆ ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.