Advertisement

ಭಾರೀ ಮಳೆ ; ಊಟಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ 

12:03 PM Aug 10, 2018 | |

ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ. 

Advertisement

ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿದೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬದಲಿ ಮಾರ್ಗದ ಮೂಲಕ ವಾಹನ ಸವಾರರನ್ನು ಕಳುಹಿಸುತ್ತಿದ್ದಾರೆ. 

ಕಬಿನಿ ಜಲಾಶಯದಿಂದ 74 ಸಾವಿರ ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದ್ದು ನದಿ ಪಾತ್ರದ ಪ್ರದೇಶಗಳು ಜಲಾವೃತವಾಗಿದೆ. 

ಅಣೆಕಟ್ಟೆ ನಿರ್ಮಾಣವಾದ ಜಲಾಶಯದ ಇತಿಹಾಸದಲ್ಲೇ 75 ಸಾವಿರ ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ ಎಂದು ಜಲಾಶಯದ ಕಾರ್ಯಪಾಲಕ ಅಭಿಯಂತರ ಜಗದೀಶ್‌ ಉದಯವಾಣಿಗೆ ತಿಳಿಸಿದ್ದಾರೆ.

ಸೂತ್ತೂರು ಕ್ಷೇತ್ರಕ್ಕೆ ಸಂಪರ್ಕಿಸುವ ಸೇತುವೆಯೂ ಮುಳುಗಡೆಯಾಗಿದ್ದು, ಜನರು , ಮಠಕ್ಕಾಗಮಿಸುವವರು,ಹೊಲಗಳಿಗೆ ತೆರಳುವಾಗ ರೈತರು ಎಚ್ಚರ ವಹಿಸಲು ಸುತ್ತೂರು ಶ್ರೀಗಳು ಮನವಿ ಮಾಡಿದ್ದಾರೆ. 

Advertisement

ಎಚ್‌.ಡಿ.ಕೋಟೆಯಲ್ಲೂ  ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. 

 ತಾಲೂಕಿನ ಚಕ್ಕೂರು, ಹೊಮ್ಮರಗಳ್ಳಿ ಸಮೀಪ ಹರಿಯುವ ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ದೊಡ್ಡ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. ಎಚ್‌.ಡಿ.ಕೋಟೆ ಮತ್ತು ಸರಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ತುಂಬಸೋಗೆ ಸಮೀಪದ ಸೇತುವೆ ಬಹುತೇಕ ತುಂಬಿ ಹರಿಯುತ್ತಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೆಳೆಗಳಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿದೆ

Advertisement

Udayavani is now on Telegram. Click here to join our channel and stay updated with the latest news.

Next