Advertisement

ಮುಂದಿನ 5 ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

04:25 PM Jun 06, 2024 | Team Udayavani |

ಅಸ್ಸಾಂ: ಪ್ರಸ್ತುತ ಈಶಾನ್ಯ ಅಸ್ಸಾಂನಲ್ಲಿ ನೆಲೆಗೊಂಡಿರುವ ಚಂಡಮಾರುತದ ಪರಿಚಲನೆಯು ಬಂಗಾಳಕೊಲ್ಲಿಯಿಂದ ಬಲವಾದ ನೈಋತ್ಯ ಮತ್ತು ದಕ್ಷಿಣದ ಮಾರುತಗಳೊಂದಿಗೆ ಸೇರಿಕೊಂಡು ಈಶಾನ್ಯ ರಾಜ್ಯಗಳ ಹವಾಮಾನದ ಮೇಲೆ ಪ್ರಭಾವ ಬೀರುವ ನಿರೀಕ್ಷೆಯಿದೆ.

Advertisement

ಮುಂದಿನ ಐದು ದಿನಗಳಲ್ಲಿ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಉಪ ಪ್ರದೇಶಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ಸಾಂ, ಮೇಘಾಲಯ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಜೂನ್ 6 ರಿಂದ 10 ರವರೆಗೆ ಬಾರಿ ಮಳೆಯ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶದಲ್ಲಿ ಜೂನ್ 8ರಿಂದ 10ರವರೆಗೆ ಮತ್ತು ನಾಗಾಲ್ಯಾಂಡ್ ಜೂನ್ 10 ರಂದು ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಸೌರಾಷ್ಟ್ರ ಮತ್ತು ಕಚ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ತೆಲಂಗಾಣ ಮತ್ತು ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ. ಜೂನ್ 6 ರಿಂದ 8 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಇದೇ ರೀತಿಯ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಪಕ್ಷ ವಿರೋಧ ಚಟುವಟಿಕೆ ಮಾಡಿಲ್ಲ: ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ: ಮಹೇಂದ್ರ ತಮ್ಮಣ್ಣವರ

Advertisement
Advertisement

Udayavani is now on Telegram. Click here to join our channel and stay updated with the latest news.

Next