Advertisement
ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಿದೆ. ಮುಖ್ಯವಾಗಿ ಪಣಂಬೂರ್, ಕೋಟಾ ಹಾಗೂ ಆಗುಂಬೆಯಲ್ಲಿ ತಲಾ 9 ಸೆಂ.ಮೀ. ಮತ್ತು ಮಂಗಳೂರಿನಲ್ಲಿ 8 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Related Articles
Advertisement
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 17ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗೆ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ್ ಜಿಲ್ಲೆಗೆ ಜೂನ್ 17ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಜೂ.17ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ:
ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45ರಿಂದ 55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ, ಜೂನ್ 17ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.