Advertisement

Rain: ಕೇರಳದಲ್ಲಿ ಭಾರೀ ಮಳೆ: IMD ಅಲರ್ಟ್‌ ಘೋಷಣೆ

09:43 PM Sep 29, 2023 | Team Udayavani |

ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಸೋಮವಾರದವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

Advertisement

ಅಲ್ಲದೇ, ತಿರುವನಂತಪುರಂ, ಅಳಪ್ಪುಳ, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಅರಬ್ಬೀ ಸಮುದ್ರ ಕೊಂಕಣ ಗೋವಾ ಕರಾವಳಿ ಭಾಗ ಹಾಗೂ ಈಶಾನ್ಯ ಬಂಗಾಳ ಕೊಲ್ಲಿ ಭಾಗಗಳಲ್ಲಿ ವಾಯುಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇರಳ ಕರಾವಳಿ ಭಾಗದಲ್ಲಿ ಗಾಳಿ ವೇಗ ಪಡೆದಿದ್ದು, ಗಂಟೆಗೆ 40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಗಳಿದೆ. ಭಾರೀ ಗುಡುಗು -ಮಿಂಚು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next