Advertisement

ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ: ಮಂಗಳವಾರವೂ ಶಾಲೆಗಳಿಗೆ ರಜೆ

03:58 PM Jul 24, 2023 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷೆ ದೃಷ್ಟಿಯಿಂದ ಜು. 25ರಂದೂ ಅಂಗನವಾಡಿ ಗಳಿಗೆ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ.

Advertisement

ಮುಂಜಾಗೃತಾ ಕ್ರಮವಾಗಿ ಸೋಮವಾರ ರಜೆ ಘೋಷಿಸಲಾಗಿತ್ತು, ಮಂಗಳವಾರವೂ ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳು ತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ಬರೆ, ವಿದ್ಯುತ್‌ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ.

ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ವಾಹನಗಳ ಸಂಚಾರ ದುಸ್ತರವಾಗಿದೆ.

ವಿ.ವಿ. ಪರೀಕ್ಷೆ ಮುಂದಕ್ಕೆ: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೊಳಪಟ್ಟ ಕೊಡಗು ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಲ್ಲಿ ಸೋಮವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next