Advertisement

Rain: ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

02:48 PM Jul 08, 2024 | Team Udayavani |

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ದೂಧಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ.

Advertisement

ಈಗ ಲಭ್ಯದ ಅಗಿರುವ ಮಾಹಿತಿಯ ಪ್ರಕಾರ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣ 62 ಸಾವಿರ ಕ್ಯೂಸೆಕ್ಸ್ ದಾಟಿದೆ. ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.

ಇದರಿಂದ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 21 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಲಾಶಯದ ಮಟ್ಟದಲ್ಲಿ ನಾಲ್ಕು ಅಡಿಗಳಷ್ಟು ಏರಿಕೆಯಾಗಿದೆ.

ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2123 ಅಡಿ ನೀರು ಸಂಗ್ರಹವಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ.

ಮಲಪ್ರಭಾ ನದಿ

Advertisement

ಇದರಿಂದ ಮಲಪ್ರಭಾ ನದಿಯ ಮೂಲಕ ಜಲಾಶಯಕ್ಕೆ 12,995 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ಜಲಾಶಯದಲ್ಲಿ ಒಂದೇ ದಿನ ಎರಡು ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2050 ಅಡಿ ನೀರು ಸಂಗ್ರಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next