Advertisement

ಮಂಡ್ಯದಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

10:54 AM Aug 29, 2022 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (1 ರಿಂದ 10ತರಗತಿ ವರೆಗೆ ) ಸೋಮವಾರ ರಜೆ ಘೋಷಿಸಲಾಗಿದೆ.‌

ಇದನ್ನೂ ಓದಿ:ಪುಂಜಾಲಕಟ್ಟೆಯಲ್ಲಿ ಬೈಕ್‌ಗಳು ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿ ಸಾವು

ಮಾರ್ಗ ಬದಲಾವಣೆ: ರಾಮನಗರದಲ್ಲಿ ಅತಿ ಹೆಚ್ಷು ಮಳೆ ಸುರಿದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತಿರುವುದರಿಂದ ಹೆದ್ದಾರಿ ಬಂದ್ ಆಗಿದೆ. ಆದ್ದರಿಂದ ಮದ್ದೂರಿನ ಅಡಿಗಾಸ್ ಹೋಟೆಲ್ ಬಳಿ ಸಂಚಾರಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಹುಲಿಯೂರುದುರ್ಗದ ಮೂಲಕ ಮಾಗಡಿ ಮಾರ್ಗವಾಗಿ ಬೆಂಗಳೂರಿಗೆ ತೆರಳುವಂತೆ ಮಾರ್ಗ ಬದಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next