Advertisement

ಅ.15ರ ವರೆಗೆ ರಾಜ್ಯದ ವಿವಿದೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

07:20 PM Oct 12, 2020 | mahesh |

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ತೀವ್ರತೆ ಮುಂದಿನ 12 ಗಂಟೆಗಳಲ್ಲಿ ಮತ್ತಷ್ಟು ಹೆಚ್ಚಾಾಗುವ ಸಾಧ್ಯತೆ ಇದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಉತ್ತರ ಒಳನಾಡು ಹಾಗೂ ಕರವಾಳಿಯ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, ಅ.15ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಅ.15ರ ವರೆಗೆ 115 ಮಿ. ಮೀನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅರ್ಲಟ್ ನೀಡಲಾಗಿದೆ.

ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರದಲ್ಲಿ ಅ.13ಕ್ಕೆ ಯಲ್ಲೋ ಹಾಗೂ ಅ.14ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇವುಗಳಲ್ಲಿ ಆಯ್ದ ಜಿಲ್ಲೆಗಳಲ್ಲಿ ಅ.15ಕ್ಕೂ ಯಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಅ.13ಕ್ಕೆ ಆರೆಂಜ್ ಹಾಗೂ ಅ.14ಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಗದಗ, ಬಳ್ಳಾಾರಿ, ಚಿಕ್ಕಬಳ್ಳಾಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next