Advertisement
ರಾಜ್ಯದ ಹಲವು ಜಿಲ್ಲೆಗಳ ತಗ್ಗು ಪ್ರದೇಶಗಳು ಇನ್ನೂ ಜಲಾವೃತವಾಗಿಯೇ ಇವೆ. ರಾಜ್ಯಾದ್ಯಂತ ಒಟ್ಟು 9,000ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಜಲಾವೃತ ಪ್ರದೇಶಗಳಲ್ಲಿ ಸಿಲುಕಿದ್ದ 468 ಮಂದಿಯನ್ನು ರಕ್ಷಿಸಲಾಗಿದೆ. ದಂಗ್,ವಲ್ಸದ್, ತಪಿ ಮತ್ತು ಸೂರತ್ ನಗರಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಮಹಾರಾಷ್ಟ್ರದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಮಂಗಳವಾರ ಮೂವರು ಮಳೆಯಿಂದಾಗಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Advertisement
ಹೈದರಾಬಾದ್, ದೆಹಲಿಯಲ್ಲೂ ಮಳೆ ಜೋರು:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ಬೆಳಗ್ಗೆಯೇ ಮಳೆಯ ಕಾಟ ಆರಂಭವಾಗಿತ್ತು. ಹಲವು ಪ್ರದೇಶಗಳು ಜಲಾವೃತವಾಗಿದ್ದರಿಂದ ಜನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಅದೇ ರೀತಿ ತೆಲಂಗಾಣದ ರಾಜಧಾನಿ ಹೈದರಾಬಾದ್ ಹಾಗೂ ಇನ್ನಿತರ ನಗರಗಳಲ್ಲೂ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.