ಮಣಿಪುರ: ಭಾರೀ ಮಳೆಯಿಂದಾಗಿ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಉಂಟಾಗಿದ್ದು, ಇಂಫಾಲ್-ಸಿಲ್ಚಾರ್ ಹೆದ್ದಾರಿ ಬಂದ್ ಆಗಿದೆ. ಪರಿಣಾಮ ಕನಿಷ್ಠ 500 ಕ್ಕೂ ಹೆಚ್ಚು ಸರಕು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅವಾಂಗ್‌ಖುಲ್ ಮತ್ತು ರಂಗ್‌ಖುಯಿ ಗ್ರಾಮದ ನಡುವಿನ ರಾಷ್ಟ್ರೀಯ ಹೆದ್ದಾರಿ 37 ರಲ್ಲಿ ಬುಧವಾರ ಭೂಕುಸಿತ ಸಂಭವಿಸಿದೆ ವಾಹನ ಸವಾರರು ಪರದಾಡಿದ್ದಾರೆ.
ಭೂ ಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತದಿಂದಾಗಿ ಕನಿಷ್ಠ 500 ಸರಕು ವಾಹನಗಳು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿವೆ ಎಂದು ಅವರು ಹೇಳಿದರು.
ಕಳೆದ ವರ್ಷ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 61 ಜನರು ಸಾವನ್ನಪ್ಪಿದ್ದರು ಎನ್ನಲಾಗಿದೆ. ಈದೀಗ ಮತ್ತೆ ಕೆಲ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸುತ್ತಿರುವುದು ಜನರಲ್ಲಿ ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.
ಇದನ್ನೂ ಓದಿ: Mudigere ಕಾಫಿ ತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ