Advertisement

ಕಾಶ್ಮೀರದಲ್ಲಿ ಭಾರೀ ಹಿಮಪಾತ: ವಿಮಾನಗಳು ರದ್ದು, ಹೆದ್ದಾರಿ ಬಂದ್

07:38 PM Feb 23, 2022 | Team Udayavani |

ಶ್ರೀನಗರ : ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿಯನ್ನೂ ಮುಚ್ಚಲಾಗಿದೆ.

Advertisement

ಕಣಿವೆಯಲ್ಲಿ ತಾಜಾ ಹಿಮಪಾತವು ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ರಸ್ತೆ ಸಂಪರ್ಕ ಮತ್ತು ವಿದ್ಯುತ್ ಮೇಲೆ ಪರಿಣಾಮ ಬೀರಿದೆ. ಹೊಸ ಹಿಮಪಾತವು ಭೂಕುಸಿತಕ್ಕೆ ಕಾರಣವಾದ ನಂತರ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ಶ್ರೀನಗರ ವಿಮಾನ ನಿಲ್ದಾಣದಿಂದ ಬರುವ ಮತ್ತು ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಬಾರಾಮುಲ್ಲಾದಿಂದ ಬನಿಹಾಲ್‌ಗೆ ರೈಲು ಸೇವೆಯನ್ನು ಸಹ ನಿಲ್ಲಿಸಲಾಗಿದೆ. ಸರ್ಕಾರವು ರಸ್ತೆಗಳಿಂದ ಹಿಮವನ್ನು ತೆರವುಗೊಳಿಸುತ್ತಿರುವುದರಿಂದ ಶ್ರೀನಗರದಿಂದ ಇತರ ಜಿಲ್ಲೆಗಳಿಗೆ ಹೋಗುವ ಹೆದ್ದಾರಿಗಳನ್ನು ಮುಚ್ಚಲಾಗಿದೆ.

ಹಿಮಪಾತವು ಪ್ರಸರಣ ಮಾರ್ಗಗಳು ಮತ್ತು ವಿದ್ಯುತ್ ಕಂಬಗಳಿಗೆ ಭಾರಿ ಹಾನಿಯನ್ನುಂಟುಮಾಡಿದ್ದು, ಕಣಿವೆಯಾದ್ಯಂತ ವಿದ್ಯುತ್ ಕಡಿತಕ್ಕೆ ಕಾರಣವಾಗಿದೆ, ವಿಶೇಷವಾಗಿ ಶ್ರೀನಗರದಲ್ಲಿರುವ ಪ್ರಸರಣ ಮಾರ್ಗಗಳಿಗೆ ಶೇ.60ರಷ್ಟು ಹಾನಿಯಾಗಿದೆ ಎಂದು ವಿದ್ಯುತ್ ಇಲಾಖೆ ತಿಳಿಸಿದೆ.

ಅನೇಕ ಮನೆಗಳಿಗೆ ಹಾನಿಯಾಗಿದೆ. ಕುಲ್ಗಾಮ್ ಜಿಲ್ಲೆಯ ತಂಗ್ಮಾರ್ಗ್ ಅಹರ್ಬಲ್ ಪ್ರದೇಶದಲ್ಲಿ ಹಿಮಪಾತದಿಂದಾಗಿ ಮನೆ ಕುಸಿದು ಬಿದ್ದಾಗ ಆರು ಸದಸ್ಯರ ಕುಟುಂಬವನ್ನು ಆಡಳಿತವು ರಕ್ಷಿಸಿದೆ. ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

Advertisement

ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಇಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಆಡಳಿತವು ಪ್ರತಿ ಜಿಲ್ಲೆಗೆ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next