Advertisement

ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧ

05:41 PM Jun 16, 2020 | keerthan |

ಶಿವಮೊಗ್ಗ: ಆಗುಂಬೆ ಘಾಟಿ ರಸ್ತೆಯಲ್ಲಿ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.

Advertisement

ಆಗುಂಬೆ ಭಾಗದಲ್ಲಿ ಅತಿಯಾಗಿ ಸುರಿಯುವ ಮಳೆಯಿಂದ ಘಾಟಿ ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಜೂನ್ 15ರಿಂದ ಅಕ್ಟೋಬರ್ 15ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ ಹೇರಲಾಗಿದ್ದು, ಈ ಸಮಯದಲ್ಲಿ12 ಟನ್ ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳಿಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಸಂಚರಿಸುವಂತಿಲ್ಲ.

ಈ ಸಮಯದಲ್ಲಿ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಎರಡು ಪರ್ಯಾಯ ಮಾರ್ಗ ಸೂಚಿಸಿದ್ದು, ಶಿವಮೊಗ, ತೀರ್ಥಹಳ್ಳಿ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ, ಮಂಗಳೂರ ಮಾರ್ಗವಾಗಿ ಸಂಚರಿಸಬಹುದು. ಅಲ್ಲದೆ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ, ಮಂಗಳೂರು ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next