Advertisement

ಸಾಲು ಸಾಲು ರಜೆ: ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ದಂಡು!

04:28 PM Oct 16, 2021 | Team Udayavani |

ಚಿಕ್ಕಮಗಳೂರು: ರಾಜ್ಯದ ಅತಿ ಎತ್ತರದ ಪ್ರದೇಶ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಸಾಲುಗಟ್ಟಿ ಬರುತ್ತಿದ್ದಾರೆ. ಸಾಲು ಸಾಲು ರಜೆಗಳಿರುವ ಕಾರಣದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

Advertisement

ಸಾವಿರಾರು ಸಂಖ್ಯೆಯಲ್ಲಿ ಮುಳ್ಳಯ್ಯನಗಿರಿಯತ್ತ ಪ್ರವಾಸಿಗರು ಮುಖಮಾಡಿದ್ದು, ಇಂದು ಒಂದೇ ದಿನ 3000ಕ್ಕೂ ಅಧಿಕ ವಾಹನಗಳು ಗಿರಿಯತ್ತ ಆಗಮಿಸಿದೆ. ಹೀಗಾಗಿ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇದನ್ನೂ ಓದಿ:ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next