Advertisement

ಭಾರೀ ಗಾಳಿ, ಮಳೆ; ಯಾವ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ?

09:19 AM Aug 07, 2019 | Nagendra Trasi |

ಉಡುಪಿ/ಕಾರ್ಕಳ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ ಕಾಲೇಜಿಗೆ ಬುಧವಾರ ರಜೆ ಘೋಷಿಸಲಾಗಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದ್ದು ಆಗಸ್ಟ್ 7 ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿಯವರೆಗೆ) ಬುಧವಾರ ರಜೆ ಘೋಷಣೆ ಮಾಡಲಾಗಿದೆ.

ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಮಹೇಶ್ಚಂದ್ರ ಅವರು ತಿಳಿಸಿದ್ದಾರೆ.

ಮೂಡಬಿದ್ರೆ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

Advertisement

ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನ ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಘೋಷಿಸಿದ್ದಾರೆ.

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆಯು ಹೆಚ್ಚಾಗಿರುವ ಕಾರಣದಿಂದ ಬುಧವಾರ ಜಿಲ್ಲೆಯಾದ್ಯಂತ ಖಾಸಗಿ ಹಾಗೂ ಅನುದಾನಿತ ಮತ್ತು ಕೇಂದ್ರೀಯ ವಿದ್ಯಾಲಯವು ಸಹ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ, ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮಂಗಳವಾರ ನೀಡಲಾಗಿದ್ದ ರಜೆಯನ್ನು ಬುಧವಾರಕ್ಕೂ ವಿಸ್ತರಿಸಲಾಗಿದೆ.

ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

ಹಾವೇರಿ :ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಾಗರ, ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next