Advertisement

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

12:41 PM Jan 06, 2025 | Team Udayavani |

ಶರಣ್‌ ಅವರ “ಅಧ್ಯಕ್ಷ’ ಸಿನಿಮಾದಲ್ಲಿ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದ ನಟಿ ಹೆಬಾ ಪಟೇಲ್‌, ಈಗ “ರಾಮರಸ’ ಎಂಬ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ಬಣ್ಣ ಹಚ್ಚುತ್ತಿದ್ದಾರೆ ನಟಿ ಹೆಬಾ.

Advertisement

ಕನ್ನಡದಲ್ಲೇ ತಮ್ಮ ಸಿನಿ ಪಯಣ ಆರಂಭಿಸಿದ್ದರೂ, ಇವರು ಖ್ಯಾತಿ ಗಳಿಸಿದ್ದು ತೆಲುಗು ಚಿತ್ರರಂಗದಲ್ಲಿ.  ಕುಮಾರಿ 21 ಎಫ್, ಮಿಸ್ಟರ್‌, ಏಂಜಲ್‌ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿ, ತೆಲುಗು ಚಿತ್ರರಂಗದಲ್ಲಿ ತಕ್ಕಮಟ್ಟಿಗೆ ಹೆಸರು ಮಾಡಿದ್ದಾರೆ. ಜತೆಗೆ ತಮಿಳಿನಲ್ಲೂ ಒಂದೆರಡು ಚಿತ್ರಗಳಲ್ಲಿ ನಟಿಸಿದ್ದಾರೆ.

ಸದ್ಯ ಜಿ ಸಿನಿಮಾಸ್‌ ಹಾಗೂ ಸೆವೆನ್‌ ಸ್ಟಾರ್‌ ಸ್ಟುಡಿಯೋ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಗುರು ದೇಶಪಾಂಡೆ ಹಣ ಹೂಡಿದ್ದು, ಬಿ.ಎಂ. ಗಿರಿರಾಜ್‌ ಆ್ಯಕ್ಷನ್‌, ಕಟ್‌ ಹೇಳುತ್ತಿದ್ದಾರೆ. ಚಿತ್ರದ ಬಿಗ್‌ಬಾಸ್‌ 10 ವಿಜೇತ ಕಾರ್ತೀಕ್‌ ಮಹೇಶ್‌ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಹೆಬಾ ಪಟೇಲ್‌ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭರತ್‌ ಬಿಜೆ ಅವರ ಸಂಗೀತ ಈ ಚಿತ್ರಕ್ಕಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ “ರಾಮರಸ’ ಚಿತ್ರತಂಡ, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next