Advertisement

ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

06:30 AM May 15, 2018 | |

ಬೆಂಗಳೂರು: ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಭೈರತಿ ಸುರೇಶ್‌ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು,  ಜೆಡಿಎಸ್‌, ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂರು ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಶಾಂತಿಯುತ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ತಳ್ಳಾಟ ನೂಕಾಟ ಕೂಡ ನಡೆಯಿತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿ ಉತ್ತರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಹಾಗೂ ಚುನಾ ವಣಾಧಿಕಾರಿಗಳು ಅಪಾರ್ಟ್‌ ಮೆಂಟ್‌ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next