Advertisement

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

12:54 AM Jan 04, 2025 | Team Udayavani |

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ಚುರುಕುಗೊಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ಸರಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಬೆಳಗಾವಿ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಪರಿಷತ್‌ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಸಿಐಡಿ ತನಿಖೆಗೆ ಸರಕಾರ ಆದೇಶಿಸಿತ್ತು. ಪ್ರಕರಣದ ತನಿಖಾಧಿಕಾರಿ, ಸಿಐಡಿ ಡಿವೈಎಸ್‌ಪಿ ಅಂಜುಮಾಲಾ ನಾಯಕ್‌ ನೇತೃತ್ವದ ತಂಡವು ಸಚಿವರ ಸರಕಾರಿ ನಿವಾಸಕ್ಕೆ ತೆರಳಿ ಪ್ರಕರಣದ ಕುರಿತು ಸಚಿವರ ಹೇಳಿಕೆ ದಾಖಲಿಸಿದೆ. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿದ್ದು, ಶೀಘ್ರದಲ್ಲೇ ಸಿ.ಟಿ. ರವಿ ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next