Advertisement

Mundgod: ಹೆಬ್ಬಾರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

11:58 AM Apr 10, 2024 | Team Udayavani |

ಮುಂಡಗೋಡ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ಯಲ್ಲಾಪುರ -ಮುಂಡಗೋಡ ಕ್ಷೇತ್ರದ ಹೆಬ್ಬಾರ್ ಬೆಂಬಲಿಗರು ಗುರುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

Advertisement

ಇಲ್ಲಿನ ಲೊಯೊಲಾ ವಿಕಾಸ‌ ಕೇಂದ್ರ ಸಭಾಭವನದಲ್ಲಿ ಗುರುವಾರ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಮೂಹರ್ತ ಪಿಕ್ಸ್ ಆಗಿದೆ.

ಕೆನರಾ ಲೋಕಸಭಾ ಚುನಾವಣೆ ಹಿನ್ನೆಲೆ ಕೆಲ ತಿಂಗಳಿಂದ ಕ್ಷೇತ್ರದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಪಕ್ಷಾಂತರ ಪರ್ವ ನಾಳೆಗೆ ಅಂತ್ಯವಾಗಲಿದೆ. ಪ್ರತಿ ಗ್ರಾಮ ಪಂಚಾಯತ್‌ ನಿಂದ ಬಿಜೆಪಿ ಕಾರ್ಯಕರ್ತರು ಮತ್ತು ಹೆಬ್ಬಾರ್ ಬೆಂಬಲಿಗರು ಸುಮಾರು 300 ಕಾರ್ಯಕರ್ತರಂತೆ ಮೂರು ಸಾವಿರ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಪುತ್ರ ವಿವೇಕ ಹೆಬ್ಬಾರರು ನಾಳೆಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿಲ್ಲ. ಬದಲಾಗಿ 2-3 ದಿನದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ್ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಿರಶಿ ಶಾಸಕ ಭೀಮಣ್ಣ ನಾಯ್ಕ, ಕಾರವಾರ ಶಾಸಕ ಸತೀಶ ಸೈಲ್ ಭಾಗವಹಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next