Advertisement

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

11:16 AM Dec 29, 2024 | Team Udayavani |

ಮಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಅಧಿ ವೇಶನದ ಸಂದರ್ಭದಲ್ಲಿ ನಡೆದ ವಿಧಾನ ಪರಿಷತ್‌ ಸದಸ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ದೂರನ್ನು ಹಕ್ಕು ಬಾಧ್ಯತಾ ಸಮಿತಿ(ಪ್ರಿವಿಲೇಜ್‌ ಕಮಿಟಿ)ಗೆ ವಹಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು. ಟಿ. ಖಾದರ್‌ ತಿಳಿಸಿದ್ದಾರೆ.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಲಕ್ಷ್ಮೀ ಹೆಬ್ಟಾಳ್ಕರ್‌ ವಿಧಾನಸಭೆ ಸದಸ್ಯರಾಗಿರುವುದರಿಂದ ಅವರ ವಿಷಯವಷ್ಟೇ ನನ್ನ ವ್ಯಾಪ್ತಿಗೆ ಬರುತ್ತದೆ. ಅವರು ಪ್ರಕರಣದ ಬಗ್ಗೆ ದೂರು ನೀಡಿದ್ದು, ಅದನ್ನು ಪ್ರಿವಿಲೇಜ್‌ ಕಮಿಟಿಗೆ ವಹಿಸಲಾಗಿದೆ ಎಂದು ಹೇಳಿದರು.

ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ ವಿಧಾನ ಪರಿಷತ್‌ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಸ್ಥಳ ಮಹಜರು ವಿಷಯ ನನ್ನ ವ್ಯಾಪ್ತಿಗೆ ಬರದು. ಅದೇನಿದ್ದರೂ ಆ ಸದನದ ಸಭಾಪತಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್‌ ವಿಷಯದ ಬಗ್ಗೆ ಶಾಸಕಾಂಗದ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗುವುದು ಎಂದರು.

ಇದಕ್ಕೆ ಪೂರಕ ಎಂಬಂತಿದ್ದ ಸದಸ್ಯರ ನಡವಳಿಕೆ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅಧಿವೇಶನ ಮುಗಿದ ಬಳಿಕವೂ ವೀಡಿಯೋ ಚಿತ್ರೀಕರಣ ಮಾಡುವ ನಿಯಮ ಈಗ ಇಲ್ಲ. ನಾನು ಹೊಸದಾಗಿ ಸಂಪ್ರದಾಯ ಆರಂಭಿಸಲಾರೆ. ಸದಸ್ಯರು ಸದನದ ಒಳಗೆ ಮಾತ್ರವಲ್ಲ, ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next