ಹಾವೇರಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ಗಾಯಗೊಂಡ ಘಟನೆ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹಲಗೇರಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಎಎಸ್‌ಐ ಪ್ರಭು ತಳವಾರ ಗಾಯಗೊಂಡಿದ್ದಾರೆ. ಸಚಿವರು ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಒನ್‌ವೇಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಸಚಿವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ನಾಸೀರ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಾಲಗೇರಿ ಎಂಬಲ್ಲಿ ಟ್ರಕ್ ಒಂದು ನನ್ನ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಅದರ ಉದ್ದೇಶ ನೋಡಿದರೆ ನನ್ನನ್ನು ಕೊಲೆ ಮಾಡುವ ಯತ್ನವಾಗಿದೆ ಎಂದು ತೋರುತ್ತದೆ. ನಾನು ಇದ್ದ ವಾಹನ ವೇಗವಾಗಿ ಚಲಿಸುತ್ತಿದ್ದುದರಿಂದ ಪಾರಾದೆ. ಆದರೆ ಟ್ರಕ್ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದೆ.
-ಅನಂತ ಕುಮಾರ್ ಹೆಗಡೆ, ಕೇಂದ್ರ ಸಚಿವ