Advertisement

ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆ, ತೇಜಸ್ವಿಗಿಲ್ಲ ಸ್ಥಾನ

07:37 PM Nov 18, 2019 | Team Udayavani |

ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ 40 ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಕೇಂದ್ರದ ಮಾಜಿ ಸಚಿವ, ಪ್ರಖರ ಹಿಂದುತ್ವವಾದಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್‌ ಹೆಗಡೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ದೂರ ಇಡಲಾಗಿದೆ.

Advertisement

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಡಿ.ವಿ.ಸದಾನಂದಗೌಡ, ಸುರೇಶ್‌ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಸಿ.ಎನ್‌. ಅಶ್ವತ್ಥ್ ನಾರಾಯಣ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ರಾಜ್ಯ ಉಸ್ತುವಾರಿ ಪಿ. ಮುರಳಿಧರ ರಾವ್‌,

ಸಚಿವರಾದ ಜಗದೀಶ ಶೆಟ್ಟರ್‌, ಈಶ್ವರಪ್ಪ, ಸಿ.ಟಿ. ರವಿ, ಆರ್‌. ಅಶೋಕ್‌, ಶ್ರೀರಾಮುಲು,. ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ್‌, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ. ಮಾಧುಸ್ವಾಮಿ, ಪ್ರಭು ಚೌಹಾಣ್‌, ಸಂಸದರಾದ ಪ್ರತಾಪ ಸಿಂಹ, ರಮೇಶ್‌ ಜಿಗಜಿಣಗಿ, ಪಿ.ಸಿ. ಮೋಹನ್‌, ಪ್ರಭಾಕರ ಕೋರೆ, ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಉಳಿದಂತೆ ಮಾಜಿ ಸಚಿವ ಉಮೇಶ್‌ ಕತ್ತಿ, ಅರುಣ್‌ ಕುಮಾರ್‌, ಅರವಿಂದ ಲಿಂಬಾವಳಿ, ಎನ್‌.ರವಿಕುಮಾರ್‌, ಮಹೇಶ್‌ ಟೆಂಗಿನಕಾಯಿ, ನಿರ್ಮಲ ಕುಮಾರ್‌ ಸುರಾನ, ಚಲವಾದಿ ನಾರಾಯಣಸ್ವಾಮಿ, ಶೃತಿ, ತಾರಾ ಅನುರಾಧ, ರಾಜುಗೌಡ, ಭಾರತಿ ಶೆಟ್ಟಿ ಅವರನ್ನು ಸ್ಟಾರ್‌ ಪ್ರಚಾರಕರನ್ನಾಗಿ ಬಿಜೆಪಿ ನೇಮಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next