Advertisement

Karnataka: ಹೆಗ್ಡೆ ಆಯೋಗದ ಅವಧಿ ವಿಸ್ತರಣೆ: ಜಾತಿಗಣತಿ ವರದಿ ಮುಂದಕ್ಕೆ

02:28 AM Feb 01, 2024 | Team Udayavani |

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಒಂದು ತಿಂಗಳ ಮಟ್ಟಿಗೆ ಮರು ನೇಮಕ ಮಾಡಿ ಬುಧವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಕೆ. ಜಯ ಪ್ರಕಾಶ್‌ ಹೆಗ್ಡೆ ಅವರ ಅಧಿಕಾ ರಾವಧಿ ಇನ್ನೊಂದು ತಿಂಗಳು ವಿಸ್ತರಣೆ ಯಾಗಿದೆ. ಇದರೊಂದಿಗೆ ತೀವ್ರ ಚರ್ಚೆಗೆ ಗ್ರಾಸವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಸಲ್ಲಿಕೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ.

Advertisement

ಆಯೋಗದ ಅಧಿನಿಯಮ 1995ರ ಪರಿಚ್ಛೇದ 3 ಮತ್ತು 4 (1)ರ ಅಡಿ ಆಯೋಗದ ಅವಧಿಯನ್ನು ಫೆ. 1ರಿಂದ 29ರ ವರೆಗೆ ಅಥವಾ ಸರಕಾರದ ಮುಂದಿನ ಆದೇಶದವರೆಗೆ ಆಯೋಗದ ಅಧ್ಯಕ್ಷ ಮತ್ತು ಸದಸ್ಯರನ್ನು ಮರುನೇಮಕ ಮಾಡಲಾಗಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆದೇಶ ಹೊರಬಿದ್ದಿದೆ.

ವರದಿ ಬಹುತೇಕ ಪೂರ್ಣ ಗೊಂಡಿದ್ದು, ಮುದ್ರಣಕ್ಕೆ ಕಳುಹಿಸು ವುದು ಮಾತ್ರ ಬಾಕಿ ಇದೆ. ಇದರ ಬೆನ್ನಲ್ಲೇ ಸಲ್ಲಿಕೆಗೆ ಸಂಬಂಧಿಸಿ ಚರ್ಚಿಸಲು ಸಿಎಂ ಭೇಟಿಗೆ ಸಮಯ ಕೇಳಲಾಗಿತ್ತು. ಆದರೆ ಸಮಯ ಸಿಕ್ಕಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next