Advertisement

ಹೆಗಡೆ, ಶೋಭಾ ವಿರುದ್ಧ ಕ್ರಮಕ್ಕೆ ದೂರು

01:30 AM Apr 11, 2020 | Sriram |

ಬೆಂಗಳೂರು: ಕೋವಿಡ್ 19 ವಿಷಯದಲ್ಲಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಾದ ಅನಂತಕುಮಾರ್‌ ಹೆಗಡೆ, ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್‌ ಹಾಗೂ ಎಂ.ಪಿ. ರೇಣುಕಾಚಾರ್ಯ ವಿರುದ್ದ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವತಿಯಿಂದ ಡಿಜಿಪಿ ದೂರು ಸಲ್ಲಿಸಲಾಗಿದೆ.

Advertisement

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ವಿಧಾನ ಪರಿಷತ್‌ ವಿಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ಎಂಎಲ್‌ಸಿ ಎಂ.ಸಿ. ವೇಣುಗೋಪಾಲ್‌ ಅವರನ್ನೊಳಗೊಂಡ ಕಾಂಗ್ರೆಸ್‌ ನಿಯೋಗವು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರನ್ನು ಬೆಂಗಳೂರಿನ ಪೊಲೀಸ್‌ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ, ಕೋವಿಡ್ 19 ಸೋಂಕು ಹರಡಿಕೆ ಸಂಬಂಧ ವದಂತಿ ಹಬ್ಬಿಸುವುದರ ಜತೆಗೆ ಪ್ರಚೋದನಕಾರಿ ಹೇಳಿಕೆ ನೀಡಿ ಕೋಮು ಸಾಮರಸ್ಯ ಹಾಳುಗೆಡವಲು ಯತ್ನಿಸುತ್ತಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಎಂ.ಪಿ. ರೇಣುಕಾಚಾರ್ಯ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತತ್‌ಕ್ಷಣ ಬಂಧಿಸಬೇಕು ಎಂದು ದೂರು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next