Advertisement

ಶೀಘ್ರದಲ್ಲಿ ಸರಕಾರಿ ವೈದ್ಯರಿಗೆ ಸಿಹಿ ಸುದ್ದಿ ನೀಡಲಿದ್ದೇನೆ :ಅರೋಗ್ಯ ಶ್ರೀರಾಮುಲು

05:18 PM Sep 16, 2020 | sudhir |

ಕಲಬುರಗಿ : ಸರಕಾರಿ ವೈದ್ಯರು ತಮ್ಮ ವಿವಿಧ ಬೇಡಿಕೆಗಳಿಗಾಗಿ ಬೇಡಿಕೆ ಇಟ್ಟಿದ್ದು ಸದ್ಯದಲ್ಲೇ ಸರಕಾರಿ ವೈದ್ಯರಿಗೆ ಸಿಹಿ ಸುದ್ದಿ ನೀಡಲಿದ್ದೇನೆ ಹಾಗಾಗಿ ಮುಂದಿನ ದಿನಗಳಲ್ಲಿ ವೈದ್ಯರು ಮುಷ್ಕರಕ್ಕೆ ಮುಂದಾಗುವುದಿಲ್ಲ ಎನ್ನುವ ಭರವಸೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು.

Advertisement

ಸ್ವ ಕ್ಷೇತ್ರ ದೇವಲ್ ಗಾಣಗಾಪುರ ದತ್ತಾತ್ರೇಯ ದರ್ಶನ ಪಡೆಯಲು ಆಗಮಿಸಿದ ಅವರು, ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತಮ್ಮ ಆರೋಗ್ಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ವೈದ್ಯರು ಅವರ ಬಳಿ ಹೋಗಿದ್ದಕ್ಕಾಗಿ ಚರ್ಚೆ ಮಾಡಿದ್ದಾರೆ. ಆ ವಿಷಯಗಳನ್ನು ಸಿಎಂ ಜೊತೆ ಚರ್ಚಿಸಿ ಇತ್ಯರ್ಥ ಮಾಡಬಹುದು. ಬೇರೆ ಯಾವ ಇಲಾಖೆಯಲ್ಲಿಯೂ ವಿಜಯೇಂದ್ರ ಹಸ್ತಕ್ಷೇಪ ಮಾಡ್ತಿಲ್ಲ ಎಂದಿದ್ದಾರೆ.

ವಿಜಯೇಂದ್ರ ಮುಖ್ಯಮಂತ್ರಿ ಪುತ್ರ ಅನ್ನುವುದಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರಿಗೆ ಶೀಘ್ರವೇ ಸಿಹಿ ಸುದ್ದಿ ಕೊಡುತ್ತೇವೆ. ವೈದ್ಯರ ಕೆಲ ಬೇಡಿಕೆಗಳನ್ನ ಈಡೇರಿಸುತ್ತೇವೆ. ಇನ್ನು ಮುಂದೆ ಮುಷ್ಕರಕ್ಕೆ ಮುಂದಾಗಲ್ಲ ಅನ್ನುವ ಭರವಸೆಯಿದೆ ಎಂದರು.

ವಾರದೊಳಗೆ ಆರಂಭವಾಗುವ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗುವುದು ಅನುಮಾನ. ಅತಿವೃಷ್ಟಿ ಮತ್ತು ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನವದೆಹಲಿಗೆ ಹೋಗುತ್ತಿದ್ದಾರೆ ಹೊರತು ಸಂಪುಟ ವಿಸ್ತರಣೆ ಮಾತುಕತೆಗೆ ಅಲ್ಲ ಎಂದರು.

ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಬಳಿ ಅಧಿಕ ಹಣ ವಸೂಲಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಅಧಿಕ ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುತ್ತೇವೆ. ಅನುಮತಿ ರದ್ದುಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next