Advertisement

Helmet Compulsory ಪೊಲೀಸರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶ

12:23 AM Mar 20, 2024 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

Advertisement

ವಿವಿಧ ಘಟಕಗಳ ಪೊಲೀಸ್‌ ಅಧಿಕಾರಿ ಮತ್ತು ಸಿಬಂದಿಗಳು ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್‌ ಧರಿಸದೆ ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿ ಗಾಯಗೊಂಡಿದ್ದಾರೆ. ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ.

ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) (ಬಿ) ರಲ್ಲಿ ನಮೂದಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್‌ ಅನ್ನು ಧರಿಸಬೇಕು. ಹೆಲ್ಮೆಟ್‌ ಭದ್ರವಾಗಿ ಕಟ್ಟಿಕೊಳ್ಳಬೇಕು.

Advertisement

Udayavani is now on Telegram. Click here to join our channel and stay updated with the latest news.

Next