Advertisement

ಪ್ರವಾಹ ಪೀಡಿತರಿಗೆ ನೆರವಾಗಿ

11:17 PM Aug 07, 2019 | Lakshmi GovindaRaj |

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ಸ್ಪಂದಿಸಬೇಕಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ನದಿ ದಂಡೆಯ ಮೇಲಿನ ಹಳ್ಳಿಗಳಲ್ಲಿ ದೊಡ್ಡ ಅನಾಹುತ ಆಗಿದೆ.

Advertisement

ಊಟದ ವ್ಯವಸ್ಥೆ, ತಾತ್ಕಾಲಿಕ ವಸತಿ ವ್ಯವಸ್ಥೆ, ಆರೋಗ್ಯ ಸೇವೆ ವ್ಯವಸ್ಥೆ, ಆಹಾರಧಾನ್ಯ ಮುಟ್ಟಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ತಿಳಿಸಿದರು. ಜನರು ಸಂಕಷ್ಟದಲ್ಲಿದ್ದಾಗ ಸ್ಪಂದಿಸಿದರೆ ಜನರ ಪ್ರೀತಿ ಗಳಿಸಿದಂತಾಗುತ್ತದೆ. ಎಲ್ಲೆಲ್ಲಿ ಮನೆ ಬಿದ್ದಿವೆಯೋ ಅಲ್ಲಿ ತಾತ್ಕಾಲಿಕ ಮನೆ ನಿರ್ಮಿಸಿ ಕೊಡುವ ಬಗ್ಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next